Namma Haveri 24X7 News

Bureau Report

ಫೈಯರ್ ಬ್ರಾಂಡ್ , ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಗೆ ಯಡಿಯೂರಪ್ಪ ಕಾರಣ-ಜಯಮೃತ್ಯುಂಜಯ ಸ್ವಾಮೀಜಿ ನೇರ ಆರೋಪ.

ಧಾರವಾಡ : ಕರ್ನಾಟಕದ ಫೈಯರ್ ಬ್ಯಾಂಡ್, ಹಿಂದೂ ಹುಲಿ ಎಂದೇ ಚಾಪು ಮೂಡಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್​ ಯತ್ನಾಳ ಉಚ್ಛಾಟನೆಗೆ ಬಿಎಸ್‌ ಯಡಿಯೂರಪ್ಪ ಮತ್ತು ಕುಟುಂಬವೇ ಕಾರಣ.ಇದನ್ನು ನಾನು ನೇರ ಆರೋಪ ಮಾಡಿದ್ದಾರೆ.
ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು. ಪಕ್ಷದಲ್ಲಿರುವ ಪಂಚಮಸಾಲಿಗಳು ಹೊರಗೆ ಬರಬೇಕು. ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ.

ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು.

ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಈಗ ಬಿಜೆಪಿಗೆ 60 ಸ್ಥಾನ ಬಂದಿವೆ. ಮುಂದೆ ಮೂವತ್ತು ಸೀಟು ಕೂಡ ಬರುವುದಿಲ್ಲ. ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ ಎಂದು ಹೇಳಿದರು.

ನಾವು ಉಗ್ರ ಹೋರಾಟ ಮಾಡುತ್ತೇವೆ. ಈ ಹೋರಾಟ ಪ್ರಧಾನಿ ಮೋದಿ, ಸಚಿವ ಅಮಿತ್​ ಶಾ ವಿರುದ್ಧ ಅಲ್ಲ. ಪಂಚಮಸಾಲಿಗಳ ನಾಯಕತ್ವ ತುಳಿದವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅಂದು, ಕಿತ್ತೂರು ರಾಣಿ ಚನ್ನಮ್ಮಳಿಗೆ ಮೋಸ ಮಾಡಿದ ಶಕ್ತಿಗಳೇ ಈಗ ಹೀಗೆ ಮಾಡುತ್ತಿವೆ. 21ನೇ ಶತಮಾನದಲ್ಲಿ ಅದೇ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ. ಉಚ್ಛಾಟನೆ ವಾಪಸ್ ಪಡೆಯಲೇಬೇಕು. ಇಲ್ಲದೇ ಹೋದಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿಯಲ್ಲಿ ನಾಳೆ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದ್ಯಂತ ಪ್ರತಿಭಟನೆ ಮಾಡುತ್ತೇವೆ. ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಹೈಕಮಾಂಡ್ ನಮಗೆ ಕುಟುಂಬ ರಾಜಕಾರಣ ಬೇಕು ಎಂದು ನೇರವಾಗಿ ಹೇಳಲಿ. ನಾಳೆ ಎಲ್ಲವನ್ನೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಗುಡುಗಿದರು.

News Updates

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಡ್ಯಾಪ್ಕೋ ವತಿಯಿಂದ ನಡೆದ ಜಿಲ್ಲಾ ಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಪುರುಷ ವಿಭಾಗದಲ್ಲಿ ಆರ್ ಟಿ ಇ ಎಸ್ ಕಾಲೇಜ ಪ್ರಥಮ ವಾದರೆ, ಮಹಿಳಾ ವಿಭಾಗದಲ್ಲಿ ರಾಣೇಬೆನ್ನೂರ್ ನ ಆರ್. ಆರ್ ಕಾಲೇಜು ಜಿಲ್ಲೆ ಗೆ ಪ್ರಥಮ.

News Updates

ಆರ್. ಎಸ್.ರಾಮನಗೌಡ್ರ ಸಾರಥ್ಯದಲ್ಲಿ.

ನಮ್ಮ ಹಾವೇರಿ 24X7

haveriexpress78@gmail.com
Contact: 7892724924