ಬೆಂಗಳೂರು :ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ರಾಜ್ಯ ಗ್ರಹ ಇಲಾಖೆ ಬರೋಬ್ಬರಿ 55 ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ವರ್ಗಾವಣೆ ಕೇವಲ ದಕ್ಷಿಣ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದು, ಉತ್ತರ ಕರ್ನಾಟಕದ ಕಡೆ ಗಮನ ಹರಿಸುವುದು ಅಗತ್ಯವಾಗಿದೆ. ಕಾರಣ ಉತ್ತರ ಕರ್ನಾಟಕದ ಕೆಲವುಭಾಗದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮರಳು ಮಾಫಿಯದಲ್ಲಿ ತೊಡಗಿದ್ದು, ಹಪ್ತಾ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಉತ್ತರ ಕರ್ನಾಟಕದ ಕೆಲವು ಕಡೆಗಲ್ಲಿ ಮರಳು ಮಾಫಿಯಾ, ಒಸಿ, ಇಸ್ಪೀಟ್,ಗ್ಯಾಂಬಲಿಂಗ್ , ರಿಯಲ್ ಎಸ್ಟೇಟ್ ಇತರೆ ಕ್ರೈಮಗಳಲ್ಲಿ ಪೊಲೀಸ್ ರೇ ಭಾಗಿಯಾಗುತ್ತಿರುವುದು ಸಮಾಜಕ್ಕೆ ಮಾರಕವಾಗುತ್ತಿದೆ.
ಮಾನ್ಯ ಗೃಹ ಸಚಿವರಾದ ಜಿ ಪರಮೇಶ್ವರ್ ಅವರೇ ಉತ್ತರ ಕರ್ನಾಟಕದ ಹೆಬ್ಬಾಗಿಲು ತುಂಗಭದ್ರಾ ನದಿ ದಡದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೆಚ್ಚಾಗಿ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತ ಪೊಲೀಸ್ ಅಧಿಕಾರಿಗಳು ಜಿಲ್ಲೆಗೆ ಶಾಪವಾಗುತ್ತಿದ್ದಾರೆ.ಉತ್ತರ ಕರ್ನಾಟಕದಲ್ಲಿ ಮಣ್ಣುಗಣಿಗಾರಿಕೆ, ಮರಳು ಗಣಿಗಾರಿಕೆ, ಕಲ್ಲು ಗಣಿಗಾರಿಕೆಗೆ ಪೊಲೀಸರೇ ಸಾಥ್ ನೀಡುತ್ತಿರುವುದು ಅನೇಕ ಮಾಧ್ಯಮಗಳಲ್ಲಿ ಮುತ್ತು ಪತ್ರಿಕಗಳಲ್ಲಿ ಪ್ರಕಟವಾಗುತ್ತಿದ್ದರೊ ಸಹ ಎಲ್ಲಾ ಗೊತ್ತಿದ್ದರೂ ಗೊತ್ತಿಲ್ಲದಂತೆ ಅಕ್ರಮಕ್ಕೆ ಸಾಥ್ ಕೊಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯ ಸರ್ಕಾರ ಆಕ್ರಮದಲ್ಲಿ ಭಾಗಿಯಾದ ಸಿಬ್ಬಂದಿಗಳನ್ನು ಕೂಡಲೇ ವರ್ಗಾವಣೆ ಮಾಡಿ ಉತ್ತರ ಕರ್ನಾಟಕದ ಸುಗಮ ಆಡಳಿತಕ್ಕೆ ಮುಂದಾಗ ಬೇಕೆಂದು ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.








































