Namma Haveri 24X7 News

Bureau Report

ಹಾವೇರಿ ಜಿಲ್ಲೆಗೆ ಮೊದಲ ಮಹಿಳಾ ಎಸ್ಪಿಯಾಗಿ ಯಶೋಧ ಎಸ್ ವಂಟಗೋಡಿ ಅಧಿಕಾರ ಸ್ವೀಕಾರ: ಜಿಲ್ಲೆಯಲ್ಲಿ ಹಲವು ಸಮಸ್ಯೆ, ಸವಾಲುಗಳು.

ಹಾವೇರಿ :ಹಾವೇರಿ ಜಿಲ್ಲೆಗೆ ಮೊಟ್ಟ ಮೊದಲ ಮಹಿಳಾ ಎಸ್ಪಿಯಾಗಿ ಜೂ, ಕಿರಣ್ ಬೇಡಿ ಎಂದೇ ಹೆಸರಾದ ಯಶೋಧ ಎಸ್ ವಂಟಗೋಡಿ ಅಧಿಕಾರ ವಹಿಸಿಕೊಂಡಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಗಳು ಮಹತ್ವದ ಹುದ್ದೆಯನ್ನು ವಹಿಸಿಕೊಂಡಿರುವುದು ಹೆಮ್ಮೆಯ ವಿಷಯ,ಆದರೆ ಹಾವೇರಿ ಜಿಲ್ಲೆಯಲ್ಲಿ ಹತ್ತು ಹಲವಾರು ಸಮಸ್ಯೆ/ ಸವಾಲುಗಳು ಇರುವುದನ್ನು ನಾವು ಕಾಣುತ್ತೇವೆ. ಇವುಗಳಲ್ಲಿ ಮುಖ್ಯವಾದಗಳೆಂದರೆ.

1. ಕರ್ನಾಟಕದಲ್ಲಿ ಹಾವೇರಿ ಜಿಲ್ಲೆ “ಪೋಕ್ಸೋ ” ಪೋಕ್ಸೋ ಕಾಯ್ದೆ ಎಂದರೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (Protection of Children from Sexual Offences Act)-2012 ಪ್ರಕರಣಗಳಲ್ಲಿ ಪ್ರಥಮ ಸ್ಥಾನದಲ್ಲಿದೆ.
ಪೋಕ್ಸೋ ಪ್ರಕರಣದಲ್ಲಿ ಹಾವೇರಿ ಜಿಲ್ಲೆ ಕರ್ನಾಟಕದಲ್ಲಿ ಪ್ರಥಮ ಸ್ಥಾನದಲ್ಲಿರುವುದನ್ನು ನಾವು ಕಾಣುತ್ತೇವೆ. ಈ ಪ್ರಕರಣಗಳನ್ನು ತಡೆಗಟ್ಟುವ ಕುರಿತು ಕ್ರಮ ಕೈಗೊಳ್ಳುವುದು.

2. ಹಾವೇರಿ ಜಿಲ್ಲೆಯಲ್ಲಿ ನಕಲಿ ಬೀಜ /ಗೊಬ್ಬರ ಮಾರಾಟ ಜಾಲ.
ಹಾನಗಲ್,ರಾಣೇಬೆನ್ನೂರು, ಹಿರೇಕೆರೂರು ತಾಲೂಕುಗಳಲ್ಲಿ ನಕಲಿ ಬೀಜ ಮತ್ತು ಗೊಬ್ಬರ ಮಾರಾಟದ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು ಈ ಬಗ್ಗೆ ಕ್ರಮವಸಬೇಕಾದ ಜವಾಬ್ದಾರಿ ತಮ್ಮ ಮೇಲಿದೆ.

3. ಜಿಲ್ಲೆಯ ನಗರ /ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆ ಬಲು ಜೋರು, ಕ್ರಮ ವಹಿಸಬೇಕಾದ ಪೊಲೀಸರು ಮೌನಕ್ಕೆ ಜಾರಿರುವುದು ಕೆಲವು ಅನುಮಾನಗಳಿಗೆ ಕಾರಣವಾಗಿದೆ.

4.ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಬಲು ಜೋರು
ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಇಲ್ಲದಿದ್ದರೂ ಸಹ ಅನಧಿಕೃತ ಅಕ್ರಮ ಮರಳು ದಂಧೆಕೊರರು ತುಂಗಭದ್ರಾ / ವರದಾ ನದಿಯಿಂದ ಅಕ್ರಮ ಮರಳು ಸಕಾಣಿಕೆ ಮಾಡುತ್ತಿರುವುದು ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ಕಂಡುಬರುತ್ತದೆ. ಈ ಬಗ್ಗೆ ಟಾಸ್ಕ್ ಫೋರ್ಸ್ ಕಾರ್ಯ ವೈಫಲ್ಯ ಕಂಡುಬರುತ್ತದೆ. ಕಾರಣ ನದಿ ತೀರದಲ್ಲಿ 24 ಗಂಟೆ ಟ್ರೋನ್ ಕಣ್ಣ್ಗಾವಲು ಇಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ತಡೆಯಬೇಕು ಎಂಬುದು ಸಾರ್ವಜನಿಕರ ಮನವಿಯಾಗಿದೆ.

5. ಹೆಣ್ಣು ಮಕ್ಕಳ ಮಾರಾಟ ಜಾಲ ಪತ್ತೆ
6. ಅಕ್ರಮ ಮಧ್ಯ ಮಾರಾಟ.

ಹೀಗೆ ಹಾವೇರಿ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ಮತ್ತು ಸವಾಲುಗಳು ಇದ್ದು, ನಿಷ್ಠೆ, ಶಿಸ್ತು ಮತ್ತು ಸೇವೆಯ ಪ್ರತೀಕವಾಗಿರುವ ನೂತನ ಪೊಲೀಸ್ ವರಿಷ್ಠಾಧಿಕಾರಿಗಳು ಈ ಸಮಸ್ಯೆಗಳನ್ನ / ಸವಾಲುಗಳನ್ನು ಬಗೆಹರಿಸಲು ಯಾವ ಯಾವ ಕ್ರಮಗಳನ್ನು ಕೈಗೊಳ್ಳುವರೇ ಎಂಬುವುದನ್ನು ಕಾದು ನೋಡಬೇಕಾಗಿದೆ.

News Updates

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಡ್ಯಾಪ್ಕೋ ವತಿಯಿಂದ ನಡೆದ ಜಿಲ್ಲಾ ಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಪುರುಷ ವಿಭಾಗದಲ್ಲಿ ಆರ್ ಟಿ ಇ ಎಸ್ ಕಾಲೇಜ ಪ್ರಥಮ ವಾದರೆ, ಮಹಿಳಾ ವಿಭಾಗದಲ್ಲಿ ರಾಣೇಬೆನ್ನೂರ್ ನ ಆರ್. ಆರ್ ಕಾಲೇಜು ಜಿಲ್ಲೆ ಗೆ ಪ್ರಥಮ.

News Updates

ಆರ್. ಎಸ್.ರಾಮನಗೌಡ್ರ ಸಾರಥ್ಯದಲ್ಲಿ.

ನಮ್ಮ ಹಾವೇರಿ 24X7

haveriexpress78@gmail.com
Contact: 7892724924