Namma Haveri 24X7 News

Bureau Report

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ.

ಹಾವೇರಿ :ಭಾರತೀಯ ಜನತಾ ಪಕ್ಷದ ವತಿಯಿಂದ ಹಾವೇರಿಯ ಜಿಲ್ಲಾಧಿಕಾರಿಗಳ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು
ಈ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾತನಾಡಿದ ಹಾವೇರಿ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ದ್ಯಾಮಣ್ಣವರ್ ಗವಿಸಿದ್ದಪ್ಪ ರೈತರಿಗೆ ಬೆಂಬಲ ಬೆಲೆ ಕೊಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಮತ್ತು ಸರ್ಕಾರ ಕೇವಲ ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು ಜನಪರ ಜನಪರ ಕಾಳಜಿ ಮರೆತಂತೆ ಕಾಣುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ ಬಸವರಾಜ್ ಬೊಮ್ಮಾಯಿ ಮಾತನಾಡಿ ಸರಕಾರದ ಸಿಎಂ &ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು ಇಬ್ಬರ ಜಗಳದಲ್ಲಿ ಮೂರನೇ ಯವರಿಗೆ ಲಾಭವಾಗುತ್ತಿದೆ, ಅಭಿವೃದ್ಧಿ ಕಾರ್ಯಗಳನ್ನು ಮರೆತಿದ್ದು ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಅಲೆ ಪ್ರಾರಂಭವಾಗಿದೆ ಮುಂದಿನ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತದಲ್ಲಿ ಗೆದ್ದು ಸರಕಾರ ರಚಿಸಲಿದೆ ಎಂದು ತಿಳಿಸಿದರು.
ಈ ಪ್ರತಿಭಟನೆ ದೇವಗಿರಿ ಗ್ರಾಮದಿಂದ ಪಾದಯಾತ್ರೆ ಮೂಲಕ ಸಾಗಿ ಜಿಲ್ಲಾಡಳಿತ ಕಚೇರಿಯ ವರೆಗೆ ಸಾಗಿತು ಈ ಸಂಧರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀ ವೀರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕರುಗಳಾದ ಶ್ರೀ ಶಿವರಾಜ ಸಜ್ಜನ, ಶ್ರೀ ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರಾದ ಶ್ರಿಮತಿ ಹೇಮಲತಾ ನಾಯಕ್ ಸೇರಿದಂತೆ ಭಾರತೀಯ ಜನತಾ ಪಕ್ಷದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.

News Updates

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಡ್ಯಾಪ್ಕೋ ವತಿಯಿಂದ ನಡೆದ ಜಿಲ್ಲಾ ಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಪುರುಷ ವಿಭಾಗದಲ್ಲಿ ಆರ್ ಟಿ ಇ ಎಸ್ ಕಾಲೇಜ ಪ್ರಥಮ ವಾದರೆ, ಮಹಿಳಾ ವಿಭಾಗದಲ್ಲಿ ರಾಣೇಬೆನ್ನೂರ್ ನ ಆರ್. ಆರ್ ಕಾಲೇಜು ಜಿಲ್ಲೆ ಗೆ ಪ್ರಥಮ.

News Updates

ಆರ್. ಎಸ್.ರಾಮನಗೌಡ್ರ ಸಾರಥ್ಯದಲ್ಲಿ.

ನಮ್ಮ ಹಾವೇರಿ 24X7

haveriexpress78@gmail.com
Contact: 7892724924